ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಮಾಡಿದ್ದ ಟ್ವೀಟ್‌ಗೆ ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ.
ಕೇಜ್ರಿವಾಲ್ ಅವರು ‘ಜವಾಬ್ದಾರಿ ಇಲ್ಲದ ಅಧಿಕಾರ ಬಯಸುತ್ತಿದ್ದಾರೆ. ಇದು ನಪುಂಸಕರ ಅಧಿಕಾರ’ ಎಂದು ತರೂರ್ ಸೋಮವಾರ ರಾತ್ರಿ ಟ್ವೀಟ್ ಮಾಡಿದ್ದರು.
ತರೂರ್ ಹೇಳಿಕೆಗೆ ನೆಟಿಜನರಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಶಶಿ ಅವರು ತೃತೀಯಲಿಂಗಿಗಳ ಕ್ಷಮೆ ಕೋರಬೇಕೆಂದೂ ಹಲವರು ಒತ್ತಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.