ADVERTISEMENT

75th Republic Day ಪರೇಡ್​​​: 25 ಸ್ತಬ್ಧಚಿತ್ರಗಳ ಪ್ರದರ್ಶನ

ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್​​​ಗೆ ಕ್ಷಣಗಣನೆ ಶುರುವಾಗಿದೆ.

​ಪ್ರಜಾವಾಣಿ ವಾರ್ತೆ
Published 26 ಜನವರಿ 2024, 8:25 IST
Last Updated 26 ಜನವರಿ 2024, 8:25 IST
<div class="paragraphs"><p>ಮಣಿಪುರದ&nbsp; ಸ್ತಬ್ಧಚಿತ್ರ</p></div>

ಮಣಿಪುರದ  ಸ್ತಬ್ಧಚಿತ್ರ

   

ನವದೆಹಲಿ: ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್​​​ಗೆ ಕ್ಷಣಗಣನೆ ಶುರುವಾಗಿದೆ.

ದೆಹಲಿಯಲ್ಲಂತೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಂಸತ್ ಭವನ ಸೇರಿದಂತೆ ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ಗಣತಂತ್ರದ ಪರೇಡ್​​​ ಚಲನದ ಇತಿಹಾಸದಲ್ಲಿ ಮೊದಲ ಬಾರಿಗೆ ದೆಹಲಿ ಮಹಿಳಾ ಪೊಲೀಸರು ಭಾಗಿಯಾಗಲಿದ್ದಾರೆ.

ಈ ತುಕಡಿಯಲ್ಲಿ ಸಂಪೂರ್ಣ ಮಹಿಳಾ ಪೊಲೀಸರು ಕರ್ತವ್ಯ ಪಥದಲ್ಲಿ ಹೆಜ್ಜೆ ಹಾಕಲಿದ್ದಾರೆ. ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ ಥೀಮ್​ ಅಡಿ 194 ಮಹಿಳಾ ಪೊಲೀಸರು ಪರೇಡ್ ಮಾಡಲಿದ್ದು, ಐಪಿಎಸ್ ಅಧಿಕಾರಿ ಶ್ವೇತಾ ಕೆ. ಸುಗತನ್ ಅವರು ಈ ಪಡೆಯನ್ನ ಮುನ್ನಡೆಸಲಿದ್ದಾರೆ.

ADVERTISEMENT

ಗಣರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಟ್ವೀಟ್ ಮೂಲಕ ಶುಭಕೋರಿದ್ದಾರೆ.

ದೆಹಲಿಯಾದ್ಯಂತ ಕಟ್ಟುನಿಟ್ಟಿನ ಭದ್ರತೆ

ಗಣರಾಜ್ಯೋತ್ಸವ ದಿನವಾದ ಇಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೆಹಲಿ ಪೊಲೀಸರು ಕಟ್ಟುನಿಟ್ಟಿನ ಭದ್ರತೆ ಕೈಗೊಂಡಿದ್ದಾರೆ. 

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮುಖ್ಯ ಅತಿಥಿ

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ 75ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿದ್ದಾರೆ. ಇದಲ್ಲದೆ ದೇಶ ವಿದೇಶಗಳ 13 ಸಾವಿರ ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 70 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಸಾರ್ವಜನಿಕರಿಗಾಗಿ 42 ಸಾವಿರ ಆಸನಗಳನ್ನು ಮೀಸಲಿರಿಸಲಾಗಿದೆ.

ಗಣರಾಜ್ಯೋತ್ಸವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನರಿಗೆ ಶುಭಕೋರಿದ್ದಾರೆ.

ದೆಹಲಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 75ನೇ ಗಣರಾಜ್ಯೋತ್ಸವದಂದು ಧ್ವಜಾರೋಹಣ ಮಾಡಿದರು

ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್ ಆರಂಭವಾಗಿದೆ

40 ವರ್ಷದ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ರಾಷ್ಟ್ರಪತಿ ಬಂದಿಳಿದಿದ್ದಾರೆ.

ರಾಷ್ಟ್ರಪತಿಗಳು ಹಾಗೂ ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಸಲಾಯಿತು. 

BSF ಪಥಸಂಚಲನ...

ಗಣತಂತ್ರದ ಪರೇಡ್​​​ ಚಲನದ ಇತಿಹಾಸದಲ್ಲಿ ಮೊದಲ ಬಾರಿಗೆ ದೆಹಲಿ ಮಹಿಳಾ ಪೊಲೀಸರು ಭಾಗಿ

ಈ ತುಕಡಿಯಲ್ಲಿ ಸಂಪೂರ್ಣ ಮಹಿಳಾ ಪೊಲೀಸರು ಕರ್ತವ್ಯ ಪಥದಲ್ಲಿ ಹೆಜ್ಜೆ ಹಾಕಿದ್ದಾರೆ. ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ ಥೀಮ್​ ಅಡಿ 194 ಮಹಿಳಾ ಪೊಲೀಸರು ಪರೇಡ್ ಮಾಡಿದ್ದು ಐಪಿಎಸ್ ಅಧಿಕಾರಿ ಶ್ವೇತಾ ಕೆ. ಸುಗತನ್ ಈ ಪಡೆಯನ್ನ ಮುನ್ನಡೆಸಿದರು.

BSF ಮಹಿಳಾ ಬ್ಯಾಂಡ್‌ ಪಥಸಂಚಲನ...

ಏರ್‌ಪೋರ್ಸ್‌ ಮಹಿಳಾ ಬ್ಯಾಚ್‌ನ ಪಥಸಂಚಲನ

ದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

ಒಡಿಶಾ ರಾಜ್ಯದ ಸ್ತಬ್ಧಚಿತ್ರ...

ಮಣಿಪುರ ರಾಜ್ಯದ  ಸ್ತಬ್ಧಚಿತ್ರ...

25 ಸ್ತಬ್ಧಚಿತ್ರಗಳ ಪ್ರದರ್ಶನ

ಗಣರಾಜ್ಯೋತ್ಸವದಲ್ಲಿ 16 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು, 9 ಸಚಿವಾಲಯಗಳು, ವಿವಿಧ ಸಂಸ್ಥೆಗಳ 25 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಯಿತು. ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಇರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.