ಪ್ರಾತಿನಿಧಿಕ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ಮಂಗಳವಾರ ನಸುಕಿನ ಜಾವ ಉಗ್ರರ ಒಳನುಸುಳಿವಿಕೆಯ ಯತ್ನವನ್ನು ಸೇನೆ ವಿಫಗೊಳಿಸಿದೆ. ಈ ಘಟನೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಟ್ಟಲ್ ಸೆಕ್ಟರ್‌ನಲ್ಲಿ ಮಂಗಳವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಉಗ್ರರು ಒಳನುಸುಳಲು ಯತ್ನಿಸಿದ್ದು, ಯೋಧರು ಉಗ್ರರನ್ನು ಹಿಮ್ಮೆಟ್ಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.