ADVERTISEMENT

ರಾಮ ಮಂದಿರ ನಿರ್ಮಾಣಕ್ಕೆ ಅಂದಾಜು ₹1800 ಕೋಟಿ ವೆಚ್ಚ: ಟ್ರಸ್ಟ್ ಕಾರ್ಯದರ್ಶಿ

ಐಎಎನ್ಎಸ್
Published 12 ಸೆಪ್ಟೆಂಬರ್ 2022, 2:49 IST
Last Updated 12 ಸೆಪ್ಟೆಂಬರ್ 2022, 2:49 IST
ರಾಮ ಮಂದಿರ - ಪ್ರಾತಿನಿಧಿಕ ಚಿತ್ರ
ರಾಮ ಮಂದಿರ - ಪ್ರಾತಿನಿಧಿಕ ಚಿತ್ರ    

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಯೋಜನೆಗೆ ಅಂದಾಜು ₹1,800 ಕೋಟಿ ವೆಚ್ಚವಾಗುವ ಸಾಧ್ಯತೆಯಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಭಾನುವಾರ ಅಯೋಧ್ಯೆಯಲ್ಲಿ ನಡೆದ ಟ್ರಸ್ಟ್ ಸಭೆಯ ನಂತರ ಪ್ರತಿಕ್ರಿಯಿಸಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಂದಾಜು ವೆಚ್ಚದ ಬಗ್ಗೆ ಮಾಹಿತಿ ನೀಡಿದರು.

ಹಲವು ಕಾರಣ ಹಾಗೂ ಪರಿಷ್ಕರಣೆಗಳ ಬಳಿಕ ಈ ಮೊತ್ತ ಅಂದಾಜಿಸಲಾಗಿದೆ. ಇದು ಕೂಡ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರಾಮ ಮಂದಿನ ನಿರ್ಮಾಣವು 2023 ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ದೇವಸ್ಥಾನ ಟ್ರಸ್ಟ್‌ನ 15 ಸದಸ್ಯರ ಪೈಕಿ 14 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲದೆ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.