ADVERTISEMENT

ಕಾಂಗ್ರೆಸ್‌ ಜತೆ ಮೈತ್ರಿ ಇಲ್ಲ: ಎಎಪಿ ಸ್ಪಷ್ಟನೆ

ಪಿಟಿಐ
Published 18 ಜನವರಿ 2019, 20:12 IST
Last Updated 18 ಜನವರಿ 2019, 20:12 IST

ನವದೆಹಲಿ: ‘ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಆಮ್‌ ಆದ್ಮಿ ಪಾರ್ಟಿ (ಎಎಪಿ) ಶುಕ್ರವಾರ ಸ್ಪಷ್ಟಪಡಿಸಿದೆ.

‘ಕಾಂಗ್ರೆಸ್‌ ನಾಯಕರ ದುರಹಂಕಾರವೇ ಮೈತ್ರಿ ಆಗದಿರಲು ಕಾರಣ. ದೆಹಲಿ, ಹರಿಯಾಣ ಹಾಗೂ ಪಂಜಾಬ್‌ನ ಎಲ್ಲ ಲೋಕಸಭೆ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ’ ಎಂದು ಎಎಪಿ ದೆಹಲಿ ಘಟಕದ ಸಂಚಾಲಕ ಗೋಪಾಲ್‌ ರಾಯ್‌ ಹೇಳಿದ್ದಾರೆ.

ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಹಾಗೂ ಕಾಂಗ್ರೆಸ್‌ ದೆಹಲಿ ಘಟಕದ ಅಧ್ಯಕ್ಷೆ ಶೀಲಾ ದೀಕ್ಷಿತ್‌ ಅವರು ಎಎಪಿ ಬಗ್ಗೆ ಇತ್ತೀಚೆಗೆ ನೀಡಿದ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಯ್‌, ಏಕಾಂಗಿಯಾಗಿ ಸ್ಪರ್ಧಿಸಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ADVERTISEMENT

‘ರಾಷ್ಟ್ರದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್‌ ವಿಷ ನೀಡಿದರೂ ನಾವು ಸ್ವೀಕರಿಸಲು ಸಿದ್ಧರಾಗಿದ್ದೆವು. ಆದರೆ ಆ ಪಕ್ಷದ ನಾಯಕರ ದುರಹಂಕಾರದ ನಡವಳಿಕೆ ಇದಕ್ಕೆ ಅಡ್ಡಗಾಲು ಹಾಕಿತು’ ಎಂದು ಅವರು ಹೇಳಿದ್ದಾರೆ.

ಎಎಪಿ ಸದ್ಯದಲ್ಲಿಯೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.

* ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.