ADVERTISEMENT

ಕೇರಳದ ಕಾಸರಗೋಡಿನಲ್ಲಿ ಕೊರೊನಾ ವೈರಸ್‌ ಸೋಂಕು ತಗುಲಿದ ಮೂರನೇ ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2020, 7:34 IST
Last Updated 3 ಫೆಬ್ರುವರಿ 2020, 7:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೇರಳ (ಕಾಸರಗೋಡು): ಚೀನಾದಲ್ಲಿ ಮಾರಕ ಕೊರೊನಾ ವೈರಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ಕೇರಳದಲ್ಲಿಸೋಂಕು ತಗುಲಿರುವ ಮೂರನೇ ಪ್ರಕರಣ ಪತ್ತೆಯಾಗಿದೆ.

‘ಕಾಸರಗೋಡಿನ ಕಾಂಞಗಾಡ್ನ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ಪ್ರಾಥಮಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ’ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಸೋಂಕು ತಗುಲಿರುವ ವ್ಯಕ್ತಿ ಇತ್ತೀಚೆಗೆ ವುಹಾನ್‌ನಿಂದ ವಾಪಾಸ್ಸಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದು, ಚಿಕಿತ್ಸೆ ಮುಂದುವರಿದೆ.

ADVERTISEMENT

ಭಾರತದ ಮೊದಲೆರಡು ಕೊರೊನಾ ವೈರಸ್‌ ಪ್ರಕರಣಗಳೂ ಕೇರಳದಲ್ಲೇ ವರದಿಯಾಗಿತ್ತು. ವುಹಾನ್‌ನಿಂದ ಬಂದವರಲ್ಲಿಯೇ ಸೋಂಕು ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.