ADVERTISEMENT

ರೈತರ ಪ್ರತಿಭಟನೆ: ಗುರುವಾರ ಮೂರನೇ ಸುತ್ತಿನ ಮಾತುಕತೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 16:09 IST
Last Updated 14 ಫೆಬ್ರುವರಿ 2024, 16:09 IST
<div class="paragraphs"><p>ರೈತರ ಪ್ರತಿಭಟನೆ</p></div>

ರೈತರ ಪ್ರತಿಭಟನೆ

   

ಚಂಡೀಗಢ(ಪಿಟಿಐ): ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರದ ಮೂವರು ಸಚಿವರು ರೈತ ಮುಖಂಡರ ಜೊತೆ ಚಂಡೀಗಢದಲ್ಲಿ ಗುರುವಾರ ಮಾತುಕತೆ ನಡೆಸಲಿದ್ದಾರೆ.

ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪೀಯೂಷ್ ಗೋಯಲ್ ಮತ್ತು ನಿತ್ಯಾನಂದ ರಾಯ್ ಅವರ ಜೊತೆ ಮಾತುಕತೆ ಸಂಜೆ 5ಕ್ಕೆ ನಿಗದಿಯಾಗಿದೆ ಎಂದು ರೈತ ಮುಖಂಡ ಸರವಣ್ ಸಿಂಗ್ ಪಂಡೇರ್ ತಿಳಿಸಿದ್ದಾರೆ.

ADVERTISEMENT

ಇದು ರೈತರ ಪ್ರತಿನಿಧಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳ ನಡುವಿನ ಮೂರನೆಯ ಸಭೆ ಆಗಲಿದೆ. ಈ ಮೊದಲು ನಡೆದಿದ್ದ ಎರಡು ಸಭೆಗಳು ಯಾವುದೇ ತೀರ್ಮಾನಕ್ಕೆ ಬರಲು ವಿಫಲವಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.