ADVERTISEMENT

ಸಿಎಎ ವಿರೋಧಿಸುತ್ತಿರುವವರಿಗೆ ತಲೆಕೆಟ್ಟಿದೆ: ಉತ್ತರ ಪ್ರದೇಶ ಡಿಸಿಎಂ

ಪಿಟಿಐ
Published 20 ಜನವರಿ 2020, 6:43 IST
Last Updated 20 ಜನವರಿ 2020, 6:43 IST
ಕೇಶವ್‌ ಪ್ರಸಾದ್‌
ಕೇಶವ್‌ ಪ್ರಸಾದ್‌   

ಮಥುರಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿರುವವರಿಗೆ ತಲೆಕೆಟ್ಟಿದೆ ಮತ್ತು ಅವರಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯಹೇಳಿದರು.

ಬೃಂದಾವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪೌರತ್ವ ಕಿತ್ತುಕೊಳ್ಳುವುದಕ್ಕಾಗಿ ಕಾಯ್ದೆಗೆ ತಿದ್ದುಪಡಿ ಮಾಡಿಲ್ಲ. ಬದಲಿಗೆ ನೆರೆ ರಾಷ್ಟ್ರಗಳಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದಕ್ಕಾಗಿ ರೂಪಿಸಲಾಗಿದೆ’ ಎಂದು ಅವರು ತಿಳಿಸಿದರು.

‘ಯಾರು ಈ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೊ ಅವರಿಗೆ ಮತಿಭ್ರಮಣೆಯಾಗಿದೆ. ಅಂತಹವರು ಚಿಕಿತ್ಸೆ ಪಡೆಯಬೇಕು’ ಎಂದು ವ್ಯಂಗ್ಯವಾಡಿದರು.

ADVERTISEMENT

ಸಿಎಎ ಅಂಗೀಕಾರವಾದ ನಂತರ ದೇಶದಾದ್ಯಂತ ಅದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಜೊತೆಗೆ ಉತ್ತರ ಪ್ರದೇಶ ಸೇರಿ ವಿವಿಧೆಡೆ ಹಿಂಸಾಚಾರಕ್ಕೂ ಎಡೆಮಾಡಿಕೊಟ್ಟಿತ್ತು. ಈ ಗಲಭೆಯಲ್ಲಿ ಸುಮಾರು 20 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.