ನವದೆಹಲಿ: ಉದ್ಯೋಗ, ಶಿಕ್ಷಣ, ಉದ್ಯಮ ಮತ್ತಿತರ ಕಾರಣಗಳಿಗಾಗಿ ವಿದೇಶ ಪ್ರಯಾಣ ಮಾಡುವವರು ಕೋವಿಡ್‌ನ 2ನೇ ಡೋಸ್ ಪಡೆದ ಮೂರು ತಿಂಗಳ ಬಳಿಕ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೋವಿನ್ ಪೋರ್ಟಲ್‌ನಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆದಿರುವುದನ್ನು ನಮೂದಿಸಲಾಗುತ್ತದೆ. ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಪತ್ರ ಬರೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.