ADVERTISEMENT

ಕೆಲವರಿಂದ ರಾಜಕೀಯ ‍ಪ್ರವಾಸೋದ್ಯಮ: ಕೇಂದ್ರ ಸಚಿವ ಅನುರಾಗ್ ಠಾಕೂರ್ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2021, 16:45 IST
Last Updated 8 ಅಕ್ಟೋಬರ್ 2021, 16:45 IST
ಅನುರಾಗ್ ಠಾಕೂರ್ (ಪಿಟಿಐ ಚಿತ್ರ)
ಅನುರಾಗ್ ಠಾಕೂರ್ (ಪಿಟಿಐ ಚಿತ್ರ)   

ನವದೆಹಲಿ: ಕೆಲವರು ರಾಜಕೀಯ ಪ್ರವಾಸೋದ್ಯಮ ಮಾಡುತ್ತಿರುವುದು ದುರದೃಷ್ಟಕರ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರತಿಪಕ್ಷ ನಾಯಕರನ್ನು ಉದ್ದೇಶಿಸಿ ವ್ಯಂಗ್ಯವಾಡಿದ್ದಾರೆ.

ಕೆಲವರಿಗೆ ನ್ಯಾಯಾಂಗ ಪ್ರಕ್ರಿಯೆಯ ಮೇಲೆ ನಂಬಿಕೆ ಇಲ್ಲವೆಂದು ಭಾವಿಸುತ್ತೇನೆ. ಅಂಥವರು ರಾಜಕೀಯ ಪ್ರವಾಸೋದ್ಯಮ (ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆ ಉದ್ದೇಶಿಸಿ) ಮಾಡುತ್ತಿರುವುದು ದುರದೃಷ್ಟಕರ. ರಾಜಸ್ಥಾನ, ಪಂಜಾಬ್ ಮತ್ತು ಛತ್ತೀಸಗಡಗಳಲ್ಲಿ ಅನೇಕ ಅಪರಾಧ ಪ್ರಕರಣಗಳಾಗುತ್ತಿವೆ. ಆದರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಅಲ್ಲಿಗೆ ಎಂದೂ ಭೇಟಿ ನೀಡಿಲ್ಲ ಎಂದು ಅನುರಾಗ್ ಠಾಕೂರ್ ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಈ ಮಧ್ಯೆ, ‘ನನ್ನ ಮಗ ಆಶಿಶ್‌ ಮಿಶ್ರಾ ಮುಗ್ಧ. ಆತ ನಾಳೆ (ಶನಿವಾರ) ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾನೆ’ ಎಂದು ಕೇಂದ್ರ ಸಚಿವ ಅಜಯ್‌ ಮಿಶ್ರಾ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.