ಲಖನೌ: ಸಮಾಜಕ್ಕೆ ಅನ್ಯಾಯ ಮಾಡಿದವರು ಈಗ ‘ನ್ಯಾಯ ಯಾತ್ರೆ’ ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಮುಂದಕ್ಕೆ ಕೊಂಡೊಯ್ದರೆ, ‘ಇಂಡಿಯಾ’ ಮೈತ್ರಿಕೂಟವು ಕೆಳಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ತಮ್ಮ ಕುಟುಂಬದ ಹೊರತು ಬೇರೆ ಯಾವುದರ ಬಗ್ಗೆಯೂ ಚಿಂತಿಸದವರು ಇಂದು ದೇಶದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದಿಂದ ಮುಂಬೈವರೆಗೆ ‘ಭಾರತ್ ನ್ಯಾಯ ಯಾತ್ರೆ’ ಹಮ್ಮಿಕೊಳ್ಳುವುದಾಗಿ ಕಾಂಗ್ರೆಸ್ ಕಳೆದ ವಾರ ಘೋಷಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.