ADVERTISEMENT

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮತದಾನ ಹಕ್ಕು ನೀಡಬಾರದೆಂದ ರಾಮ್‌ದೇವ್

ಚುನಾವಣೆಯಲ್ಲಿ ಸ್ಪರ್ಧಿಸಲೂ ಅವಕಾಶ ನೀಡಬಾರದೆಂದ ಯೋಗ ಗುರು

ಏಜೆನ್ಸೀಸ್
Published 24 ಜನವರಿ 2019, 2:30 IST
Last Updated 24 ಜನವರಿ 2019, 2:30 IST
   

ನವದೆಹಲಿ:ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗ ಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರ ಮತದಾನದ ಹಕ್ಕನ್ನು ರದ್ದುಪಡಿಸಬೇಕು. ಅಂತಹವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಬೇಕು. ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ಬಳಸದಂತೆ ನಿರ್ಬಂಧ ವಿಧಿಸಬೇಕು. ಸರ್ಕಾರಿ ಉದ್ಯೋಗಗಳನ್ನೂ ನೀಡಬಾರದು. ಹೀಗೆ ಮಾಡಿದರೆ ಜನಸಂಖ್ಯೆ ತನ್ನಿಂದತಾನೇ ನಿಯಂತ್ರಣಕ್ಕೆ ಬರಲಿದೆ ಎಂದು ರಾಮ್‌ದೇವ್ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT