ನವದೆಹಲಿ: ‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ 55ನೇ ಜನ್ಮದಿನದ ಅಂಗವಾಗಿ ಇಲ್ಲಿನ –ತಲ್ಕತೋರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ನಿರುದ್ಯೋಗಿಗಳ ಸಾಗರವೇ ಹರಿದುಬಂದಿತ್ತು’ ಎಂದು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.
’100ಕ್ಕೂ ಹೆಚ್ಚು ಕಂಪನಿಗಳು 5 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶದೊಂದಿಗೆ ಮೇಳದಲ್ಲಿ ಭಾಗವಹಿಸಿದ್ದವು. ಬೃಹತ್ ಚುನಾವಣಾ ರ್‍ಯಾಲಿ, ಧಾರ್ಮಿಕ ಕಾರ್ಯಕ್ರಮಕ್ಕೆ ಜನರು ಸೇರುವಂತೆ ಉದ್ಯೋಗಾಕಾಂಕ್ಷಿಗಳ ದಟ್ಟಣೆ ಇತ್ತು’ ಎಂದು ಐವೈಸಿ ಹೇಳಿದೆ.
‘ಉದ್ಯೋಗ ಮೇಳದಲ್ಲಿ ಭಾಗವಹಿಸಿದವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ. ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗವಿಲ್ಲದೆ ಅಲೆಯುತ್ತಿರುವವರು. ಕೆಲವರಿಗಂತೂ ಕಳೆದ 11 ವರ್ಷಗಳಲ್ಲಿ ಮೊದಲ ಬಾರಿಗೆ ಲಭಿಸುತ್ತಿರುವ ಉದ್ಯೋಗಾವಕಾಶ ಇದು’ ಎಂದು ಐವೈಸಿಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಉದಯ್ ಬಾನು ಚಿಬ್ ಹೇಳಿದರು.
‘ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನೂ ಉದ್ಯೋಗ ಮೇಳದಲ್ಲಿ ಸೇರ್ಪಡೆ ಮಾಡಲಾಗುವುದು’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.