ADVERTISEMENT

ಮಕರ ಸಂಕ್ರಾಂತಿ: ಗಂಗಾಸಾಗರದಲ್ಲಿ ಯಾತ್ರಾರ್ಥಿಗಳಿಂದ ಪವಿತ್ರ ಸ್ನಾನ

ಪಿಟಿಐ
Published 14 ಜನವರಿ 2021, 4:10 IST
Last Updated 14 ಜನವರಿ 2021, 4:10 IST
ಮಕರ ಸಂಕ್ರಾಂತಿ ಅಂಗವಾಗಿ ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳದಲ್ಲಿ ಯಾತ್ರಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು.–ಎಎಫ್‌ಪಿ ಚಿತ್ರ
ಮಕರ ಸಂಕ್ರಾಂತಿ ಅಂಗವಾಗಿ ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳದಲ್ಲಿ ಯಾತ್ರಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು.–ಎಎಫ್‌ಪಿ ಚಿತ್ರ    

ಗಂಗಾಸಾಗರ್(ಪಶ್ಚಿಮ ಬಂಗಾಳ): ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗಂಗಾ ಮತ್ತು ಬಂಗಾಳ ಕೊಲ್ಲಿಯ ಸಂಗಮದಲ್ಲಿ ನಡೆಯುತ್ತಿರುವ ಗಂಗಾಸಾಗರ ಮೇಳದಲ್ಲಿ ಸಾವಿರಾರು ಯಾತ್ರಾರ್ಥಿಗಳು ಪವಿತ್ರ ಸ್ನಾನ ಮಾಡಿ, ಪ್ರಾರ್ಥನೆ ಸಲ್ಲಿಸಿದರು.

ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ. ತೀರ್ಥಯಾತ್ರೆ ನಡೆಯುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಸೇವಕರು ಮತ್ತು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈ ಕೊರೆಯುವ ಚಳಿಯಲ್ಲೂ ದೇಶದ ವಿವಿಧ ಭಾಗಗಳಿಂದ ಯಾತ್ರಾರ್ಥಿಗಳು ಬಂದಿದ್ದು, ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಮಾಡಿದರು. ಈ ಬಾರಿ ಕೋವಿಡ್‌ನಿಂದಾಗಿ ಯಾತ್ರಾರ್ಥಿಗಳ ಸಂಖ್ಯೆ ಕಡಿಮೆಯಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.