ಸಾಂದರ್ಭಿಕ ಚಿತ್ರ
ಪುರಿ (ಒಡಿಶಾ): ‘ಮಾಘ ಸಪ್ತಮಿ’ಯ ಪ್ರಯುಕ್ತ ಇಂದು (ಮಂಗಳವಾರ) ಒಡಿಶಾದ ಪುರಿ ಜಿಲ್ಲೆಯ ಕೊನಾರ್ಕ್‌ನಲ್ಲಿರುವ ಚಂದ್ರಭಾಗ ಸಮುದ್ರ ತೀರದಲ್ಲಿ ಸಾವಿರಾರು ಜನರು ಪವಿತ್ರ ಸ್ನಾನ ಮಾಡಿದ್ದಾರೆ.
ಸ್ನಾನದ ಬಳಿಕ ಭಕ್ತರು ಮಹಾದೇವನಿಗೆ ಪೂಜೆ ಸಲ್ಲಿಸಿದ್ದು, ಕೊನಾರ್ಕ್‌ನ ಸೂರ್ಯ ದೇವಾಲಯದ ಆವರಣದಲ್ಲಿರುವ ‘ನವ ಗ್ರಹ’ಗಳಿಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ 4.37ರಿಂದಲೇ ಪವಿತ್ರ ಸ್ನಾನಕ್ಕೆ ಅವಕಾಶ ನೀಡಲಾಗಿತ್ತು.
ಚಂದ್ರಭಾಗ ಸಮುದ್ರ ತೀರದಲ್ಲಿ ಪವಿತ್ರ ಸ್ನಾನ ಮಾಡಿದರೆ ಚರ್ಮ ರೋಗಗಳು ಗುಣವಾಗುತ್ತದೆ ಮತ್ತು ಪಾಪಗಳನ್ನು ತೊಳೆಯುತ್ತದೆ ಎಂದು ಭಕ್ತರು ನಂಬಿದ್ದಾರೆ.
ಚಂದ್ರಭಾಗ ಸಮುದ್ರ ತೀರದಲ್ಲಿ ಹಬ್ಬದ ಆಚರಣೆಗಾಗಿ ಪುರಿ ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಏರ್ಪಡಿಸಿತ್ತು. ಪುರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲೆಯೇ ಇದ್ದು ವ್ಯವಸ್ಥೆಗಳ ಮೇಲ್ವಿಚಾರಣೆ ನಡೆಸಿದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನದಿಯ ಬಳಿ 20 ಜೀವರಕ್ಷಕರನ್ನು ಸಹ ನಿಯೋಜಿಸಲಾಗಿತ್ತು. ಸೂಕ್ತ ಸಂಚಾರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾಘ ಸಪ್ತಮಿಯನ್ನು ಸೂರ್ಯ ದೇವರ ಜನ್ಮದಿನವೆಂದು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್‌ನ ‘ಮಾಘ’ ತಿಂಗಳ ಏಳನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.