ಪ್ರಾತಿನಿಧಿಕ ಚಿತ್ರ
ನವದೆಹಲಿ: ದೆಹಲಿಯಿಂದ ಕಾರ್ಯನಿರ್ವಹಿಸುತ್ತಿರುವ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ವಿಮಾನಗಳಿಗೆ ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಕನಿಷ್ಠ 16 ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣಗಳನ್ನು ಎನ್‌ಐಎಗೆ ವರ್ಗಾಯಿಸುವಂತೆ ದೆಹಲಿ ಪೊಲೀಸರು ಸರ್ಕಾರದ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಅಂತಿಮ ಅನುಮೋದನೆಗಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ದೆಹಲಿಯಿಂದ ಕಾರ್ಯನಿರ್ವಹಿಸುತ್ತಿರುವ 150ಕ್ಕೂ ಹೆಚ್ಚು ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿದ್ದು, 16 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.