ರಾಯಿಟರ್ಸ್ ಚಿತ್ರ
ಮೈನ್‌ಪುರಿ: ಉತ್ತರಾಖಂಡದ ಉಧಮ್ ಸಿಂಗ್ ನಗರಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು 297 ಅಪರೂಪದ ಆಮೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮೂವರು ವನ್ಯಜೀವಿ ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೀನಾಕ್ಕೆ ಅಕ್ರಮವಾಗಿ ರಫ್ತು ಮಾಡಲು ಆಮೆಗಳನ್ನು ಉತ್ತರಾಖಂಡದ ಉಧಮ್ ಸಿಂಗ್ ನಗರಕ್ಕೆ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಈ ವೇಳೆ ಹೇಮಂತ್ ಕುಮಾರ್, ಸಮರ್ ಸಿಂಗ್ ಮತ್ತು ಟಿಂಕು ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಹೇಳಿದ್ದಾರೆ.
ಸ್ಥಳೀಯವಾಗಿ ‘ಸುಂದರಿ ಆಮೆಗಳು’ ಎಂದು ಕರೆಯಲ್ಪಡುವ 297 ಅಪರೂಪದ ಆಮೆಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರನ್ನು ಬಂಧಿಸಲು ಹುಡುಕಾಟ ನಡೆಸಲಾಗುತ್ತಿದೆ. ಆಮೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಿನೋದ್ ಕುಮಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.