ಬಂಧನ
(ಸಾಂದರ್ಭಿಕ ಚಿತ್ರ)
ಇಂಫಾಲ್: ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ವಿರುದ್ಧ ಫೇಸ್‌ಬುಕ್‌ನಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಮತ್ತು ಸಂಪುಟ ಸದಸ್ಯರನ್ನು ಗುರಿಯಾಗಿಸಿಕೊಂಡು ನಿಂದನೀಯ ಮತ್ತು ಬೆದರಿಕೆ ಸಂದೇಶವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು.
ಪ್ರಕರಣದ ಸಂಬಂಧ 'ಮಣಿಪುರ ನ್ಯೂಸ್ ಗ್ರೂಪ್ 2024' ಫೇಸ್‌ಬುಕ್ ಪುಟದ ಅಡ್ಮಿನ್‌ಗಳಾದ ನಿಂಗೋಂಬಮ್ ಡಿಂಕು (22), ಮಲೇನ್‌ಗಂಬ (21) ಮತ್ತು ತೊಂಗಮ್ ರೋಮೆನ್ (39) ಅವರನ್ನು ಬಂಧಿಸಲಾಗಿದೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಿಂಸಾಚಾರಕ್ಕೆ ಕರೆ ಮತ್ತು ಸಿಎಂ ಹಾಗೂ ಸಂಪುಟ ಸಚಿವರನ್ನು ಮುಗಿಸಲು ಪೋಸ್ಟ್ ಪ್ರಕಟಿಸಿದ್ದಕ್ಕಾಗಿ ಮೂವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.