ಸೂರತ್ (ಗುಜರಾತ್): ಸೂರತ್ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.
‘ಮುಂಜಾನೆ 3 ಗಂಟೆ ಸುಮಾರಿಗೆ ಒಎನ್ಜಿಸಿ ಹಜೀರಾ ಪ್ಲಾಂಟ್ನಲ್ಲಿ 3 ಸರಣಿ ಸ್ಫೋಟಗಳು ಸಂಭವಿಸಿದವು. ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಾವರದಲ್ಲಿನ ಅನಿಲದ ಒತ್ತಡವನ್ನು ನಿಗ್ರಹಿಸಲು ಒಎನ್ಜಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ,’ ಎಂದು ಜಿಲ್ಲಾಧಿಕಾರ ಡಾ. ಸೂರತ್ಗಾಗಿ ತಿಳಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಇನ್ನು ಈ ಕುರಿತು ಪ್ರತಿಕ್ರಿಯೆ ಒಎನ್ಜಿಸಿ, ‘ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಗುರುವಾರ ಬೆಳಿಗ್ಗೆ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಪ್ರಾಣಹಾನಿಯಾಗಿಲ್ಲ,’ ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.