ಭುವನೇಶ್ವರ: ನಕ್ಸಲರು ನಡೆಸಿದ ದಾಳಿಯಲ್ಲಿ ಸಿಆರ್‌ಪಿಎಫ್‌ನ ಮೂವರು ಸಿಬ್ಬಂದಿ ಹುತಾತ್ಮರಾಗಿರುವ ಘಟನೆ ಒಡಿಶಾದ ನೌಪಾದ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಆರ್‌ಪಿಎಫ್‌ನ ಒಬ್ಬ ಜವಾನ್ ಮತ್ತು ಇಬ್ಬರು ಸಹಾಯಕ ಸಬ್–ಇನ್ಸ್‌ಪೆಕ್ಟರ್ ಶ್ರೇಣಿಯ ಸಿಬ್ಬಂದಿ ಮೃತಪಟ್ಟಿದ್ದಾರೆ.
ರಸ್ತೆ ತೆರವು ಕಾರ್ಯದಲ್ಲಿ ತೊಡಗಿದ್ದ ಸಿಆರ್‌ಪಿಎಫ್ ತಂಡದ ಮೇಲೆ ಸುಧಾರಿತ ಮತ್ತು ಕಚ್ಚಾ ಗ್ರೆನೆಡ್ ಲಾಂಚರ್‌ಗಳ ಮೂಲಕ ನಕ್ಸಲರು ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.