ADVERTISEMENT

ತಮಿಳುನಾಡು | ವಿಷಯುಕ್ತ ಮದ್ಯ ಕುಡಿದು ಮೂವರ ಸಾವು

ಪಿಟಿಐ
Published 14 ಮೇ 2023, 12:32 IST
Last Updated 14 ಮೇ 2023, 12:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಲ್ಲುಪುರಂ (ತಮಿಳುನಾಡು): ‘ರಾಜ್ಯದ ಮರಕ್ಕನಂ ತಾಲ್ಲೂಕಿನ ಇಕ್ಕಿಯಾಕುಪ್ಪಂನಲ್ಲಿ ಶನಿವಾರ ರಾತ್ರಿ ವಿಷಯುಕ್ತ ಮದ್ಯ ಕುಡಿದು ಮೂವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

‘ಪ್ರಕರಣ ಸಂಬಂಧಿಸಿ ನಾಲ್ವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ತಿಳಿಸಿದ್ದಾರೆ.

ವಿಷಯುಕ್ತ ಮದ್ಯ ಕುಡಿದು ಇನ್ನಿಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಪುದುಚೆರಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಹಾಗೂ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ₹50 ಸಾವಿರವನ್ನು ಮುಖ್ಯಮಂತ್ರಿ ಸ್ಟಾಲಿನ್ ಘೋಷಿಸಿದ್ದಾರೆ. ಮೃತರು ಸುಮಾರು 45ರಿಂದ 55 ವರ್ಷದವರಾಗಿದ್ದಾರೆ.

ADVERTISEMENT

‘ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ವಿಷಯುಕ್ತ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿದ್ದಾರೆ.

ಮರಕ್ಕನಂನಲ್ಲಿ ರಸ್ತೆ ತಡೆದು ಪ್ರತಿಭಟನೆ

‘ಇದೇ ವೇಳೆ ಘಟನೆಯನ್ನು ವಿರೋಧಿಸಿ ಮರಕ್ಕನಂನಲ್ಲಿ ರಸ್ತೆ ತಡೆ ನಡೆಸಲಾಗಿದೆ. ಪ್ರತಿಭಟನೆ ನಡೆದಿದ್ದರಿಂದ ಕೆಲವು ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು’ ಎಂದರು.

ವಿರೋಧ ಪಕ್ಷಗಳಾದ ಎಐಎಡಿಎಂಕೆ ಹಾಗೂ ಪಿಎಂಕೆ, ಸ್ಟಾಲಿನ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ‘ಅಕ್ರಮ ಮದ್ಯ ತಯಾರಿಕೆ ದಂಧೆ ವಿರುದ್ಧ ಈಗಲಾದರೂ ಕ್ರಮ ಕೈಗೊಳ್ಳಿ’ ಎಂದು ಆಗ್ರಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.