ADVERTISEMENT

ಮಂಗಳೂರು–ಚೆನ್ನೈ ರೈಲಿಗೆ ಸಿಲುಕಿ ಹೆಣ್ಣಾನೆ, ಎರಡು ಮರಿಯಾನೆ ದುರಂತ ಸಾವು!

ಪಿಟಿಐ
Published 27 ನವೆಂಬರ್ 2021, 5:21 IST
Last Updated 27 ನವೆಂಬರ್ 2021, 5:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳುರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿಶುಕ್ರವಾರ ರಾತ್ರಿ ಸಂಭವಿಸಿದೆ.

ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳುತ್ತದೆ.

ADVERTISEMENT

ಕೊಯಮತ್ತೂರು ಬಳಿ ಇತ್ತೀಚೆಗೆ ಆನೆಗಳ ಅಸಹಜ ಸಾವು ಹೆಚ್ಚುತ್ತಿದ್ದು ಇದು ಪರಿಸರ ಹಾಗೂ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.