ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮಣ್ಣು ಕುಸಿತ ಉಂಟಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಅಲೆಮಾರಿಗಳು ಮೃತಪಟ್ಟಿದ್ದಾರೆ.
ಮತ್ತೊಬ್ಬರು ಗಾಯಗೊಂಡಿದ್ದಾರೆ. ಭಾರಿ ಮಳೆಯಿಂದ ಟ್ರಾಲ್‌ನ ನೂರ್‌ಪೋರಾ ಪ್ರದೇಶದಲ್ಲಿ ಮಣ್ಣು ಕುಸಿದಿದೆ. ಜಮ್ಮುವಿನ ರಿಯಾಸಿ ಜಿಲ್ಲೆಗೆ ಸೇರಿದ ಅಲೆಮಾರಿಗಳ ಶಿಬಿರ ಮಣ್ಣಿನಲ್ಲಿ ಹೂತು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣ್ಣಿನಡಿ ಸಿಲುಕಿದ್ದ ಒಬ್ಬರನ್ನು ರಕ್ಷಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಶಿಬಿರದಲ್ಲಿದ್ದ ಇತರ ಮೂವರೂ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.