ADVERTISEMENT

ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಪಾಕ್‌ನ ಉಗ್ರ ಸೇರಿ ಇಬ್ಬರ ಹತ್ಯೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 15:48 IST
Last Updated 11 ಏಪ್ರಿಲ್ 2022, 15:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸೇರಿ ಇಬ್ಬರು ಉಗ್ರರು ಹತ್ಯೆಯಾಗಿದ್ದು, ಪೊಲೀಸರಿಬ್ಬರು ಗಾಯಗೊಂಡಿದ್ದಾರೆ.

'ಕುಲ್ಗಾಂನಲ್ಲಿ ಸ್ಥಳೀಯ ಪೊಲೀಸ್ ಹಾಗೂ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಒಬ್ಬ ಪಾಕ್ ಹಾಗೂ ಸ್ಥಳೀಯ ಹೈಬ್ರಿಡ್ ಉಗ್ರ ಹತ್ಯೆಯಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ' ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

'ಹತ್ಯೆಯಾದ ಉಗ್ರರ ಪೈಕಿ ಒಬ್ಬ ಕುಲ್ಗಾಂನ ಚಾಕಿಸಮದ್ ಪ್ರದೇಶದಲ್ಲಿ ಕಳೆದ ವಾರ ನಡೆದ ಎನ್ ಕೌಂಟರ್ ಸಂದರ್ಭದಲ್ಲಿ ಭದ್ರತಾ ಪಡೆಗಳ ಕಣ್ತಪ್ಪಿಸಿ ಪರಾರಿಯಾಗಿದ್ದ' ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.