ಪ್ರಾತಿನಿಧಿಕ ಚಿತ್ರ
ಮುಂಬೈ: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಪೂರ್ವ ಮಲಾಡ್‌ನ ಗೋವಿಂದ್ ನಗರದಲ್ಲಿ ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದೆ. 23 ಅಂತಸ್ತಿನ ಕಟ್ಟಡದ 20ನೇ ಅಂತಸ್ತಿನ ಸ್ಲ್ಯಾಬ್ ಕುಸಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಹೆಚ್ಚಿನ ಮಂದಿ ಸಿಲುಕಿಕೊಂಡಿರುವ ಶಂಕೆಯಿಂದಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.