ಸಾಂದರ್ಭಿಕ ಚಿತ್ರ
ಪ್ರಜಾವಾಣಿ ಚಿತ್ರ
ಭೋಪಾಲ್: ಮಧ್ಯಪ್ರದೇಶದ ಸಿದ್ಧಿ ಬಳಿ 400 ಕಿಲೋ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಮಾರ್ಗದ ಕಂಬ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಆರು ಜನರಿಗೆ ಗಂಭೀರ ಗಾಯಗಳಾಗಿವೆ.
400 ಕೆ.ವಿ. ಮಾರ್ಗದಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.