ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಪ್ರಜೆ ಸೇರಿದಂತೆ ಲಷ್ಕರ್ ಎ ತೊಯ್ಬಾ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.
ಉಗ್ರರು ಇರುವ ಕುರಿತು ಖಚಿತ ಮಾಹಿತಿ ಆಧರಿಸಿ ಪುಲ್ವಾಮಾ ನಗರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದವು. ಭದ್ರತಾ ಪಡೆಯ ಕಾರ್ಯಾಚರಣೆ ಮೇಲೆ ಉಗ್ರರು ಗುಂಡು ಹಾರಿಸಲು ಆರಂಭಿಸಿದರು. ಭದ್ರತಾ ಪಡೆಗಳು ಪ್ರತಿ ಗುಂಡಿನ ದಾಳಿ ನಡೆಸುವ ಮೂಲಕ, ಕಾರ್ಯಾಚರಣೆ ಎನ್‌ಕೌಂಟರ್ ಆಗಿ ಮಾರ್ಪಟ್ಟಿತು. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
’ಹತರಾದವರಲ್ಲಿ ಒಬ್ಬನನ್ನು ಲಷ್ಕರ್ ಎ ತೊಯ್ಬಾ ಕಮಾಂಡರ್ ಐಜಾಝ್ ಅಲಿಯಾಸ್ ಅಬು ಹುರೈರಾ ಎಂದು ಗುರುತಿಸಲಾಗಿದೆ. ಈತ ಪಾಕಿಸ್ತಾನದ ಪ್ರಜೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.