ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿವೆ’ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
‘ತ್ರಾಲ್ ಪ್ರದೇಶದ ಮಂಡೂರಾದಲ್ಲಿ ಉಗ್ರರು ಇರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದರು. ಅವರನ್ನು ಕಂಡೊಡನೆ ಉಗ್ರರು ಗುಂಡು ಹಾರಿಸಲು ಮುಂದಾದರು. ಪ್ರತಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಮೂವರನ್ನು ಹೊಡೆದುರುಳಿಸಿದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.