ADVERTISEMENT

ಜಮ್ಮು– ಕಾಶ್ಮೀರ: ಮೂವರು ಉಗ್ರರ ಹತ್ಯೆ

ಪಿಟಿಐ
Published 20 ಜೂನ್ 2022, 11:28 IST
Last Updated 20 ಜೂನ್ 2022, 11:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಕಾಶ್ಮೀರದಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದರಿಂದಾಗಿ ಕಳೆದ 24 ಗಂಟೆಗಳಲ್ಲಿ ಒಟ್ಟು ಏಳು ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಅಲ್ಲದೆ, ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ.

ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಪುಲ್ವಾಮಾದ ಚತ್ಪೊರಾದಲ್ಲಿ ಭದ್ರತಾ ಪಡೆಗಳು, ಶೋಧ ಕಾರ್ಯಾಚರಣೆ ಕೈಗೊಂಡಾಗ ಉಗ್ರರು ಮತ್ತು ಭದ್ರತಾಪಡೆಗಳ ಮಧ್ಯೆಎನ್‌ಕೌಂಟರ್‌ ನಡೆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.