ನವದೆಹಲಿ: ‘ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು (ಎಂ.ಡಿ, ಎಂ.ಎಸ್) ತಮ್ಮ ಶೈಕ್ಷಣಿಕ ಅವಧಿಯಲ್ಲಿ (2020–21) ಮೂರು ತಿಂಗಳ ಕಾಲ ಜಿಲ್ಲಾ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯ’ ಎಂದು ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಹೇಳಿದೆ.
‘ದೇಶದಾದ್ಯಂತ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ಪಿ.ಜಿ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ 3, 4 ಇಲ್ಲವೇ 5ನೇ ಸೆಮಿಸ್ಟರ್‌ನಲ್ಲಿ ರೊಟೇಷನ್ ಆಧಾರದಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು. ಇದನ್ನು ಡಿಸ್ಟ್ರಿಕ್ಟ್ ರೆಸಿಡೆನ್ಸಿ ಪ್ರೋಗ್ರಾಂ (ಡಿಆರ್‌ಪಿ) ಎಂದು ಕರೆಯಲಾಗುತ್ತದೆ’ ಎಂದು ಎಂಸಿಐ ತನ್ನ ಅಧಿಸೂಚನೆಯಲ್ಲಿ ವಿವರಿಸಿದೆ.
‘ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ (ತಿದ್ದುಪಡಿ) ನಿಯಮಗಳು–2020’ರ ಪ್ರಕಾರ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಅಂತಿಮ ಪರೀಕ್ಷೆಗೆ ಹಾಜರಾಗುವ ಮುನ್ನ, ಡಿಆರ್‌ಪಿಯನ್ನು ತೃಪ್ತಿಕರವಾಗಿ ಪೂರ್ಣಗೊಳಿಸುವುದು ಅಗತ್ಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.