ADVERTISEMENT

ಐಎನ್‌ಎಸ್ ರಣವೀರ್‌ ನೌಕೆಯಲ್ಲಿ ಸ್ಫೋಟ, ಮೂವರು ಸಿಬ್ಬಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜನವರಿ 2022, 16:28 IST
Last Updated 18 ಜನವರಿ 2022, 16:28 IST
   

ಮುಂಬೈ: ನೌಕಾಪಡೆಯ ಡಾಕ್‌ಯಾರ್ಡ್‌ನ ಐಎನ್‌ಎಸ್ ರಣವೀರ್‌ ನೌಕೆಯ ಆಂತರಿಕ ವಿಭಾಗದಲ್ಲಿ ಸ್ಫೋಟ ಸಂಭವಿಸಿದ್ದು, ನೌಕಾಪಡೆಯ ಮೂವರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಕೂಡಲೆ ಕಾರ್ಯಪ್ರವೃತ್ತರಾದ ಹಡಗಿನ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಹೀಗಾಗಿ, ಯಾವುದೇ ದೊಡ್ಡ ಪ್ರಮಾಣದಲ್ಲಿ ಸಾಮಗ್ರಿಗಳ ಹಾನಿ ಸಂಭವಿಸಿಲ್ಲ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಐಎನ್‌ಎಸ್ ರಣವೀರ್ ಪೂರ್ವ ನೌಕಾ ಕಮಾಂಡ್‌ನಿಂದ ಕರಾವಳಿ ಕಾರ್ಯಾಚರಣೆಯ ನಿಯೋಜನೆಯಲ್ಲಿತ್ತು. ಶೀಘ್ರದಲ್ಲೇ ಬೇಸ್ ಪೋರ್ಟ್‌ಗೆ ಹಿಂದಿರುಗಬೇಕಿತ್ತು. ಅಷ್ಟರೋಳಗೆ ಈ ದುರ್ಘಟನೆ ಸಂಭವಿಸಿದೆ. ಸ್ಫೋಟದ ಕಾರಣದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಗೆ ಆದೇಶಿಸಲಾಗಿದೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಸ್ಫೋಟದಿಂದ ಗಾಯಗೊಂಡಿರುವ 11 ನಾವಿಕರು ಸ್ಥಳೀಯ ನೌಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.