ADVERTISEMENT

ದೆಹಲಿಯಲ್ಲಿ ಕೊಳೆಗೇರಿ ನಿವಾಸಿಗಳಿಂದ ಪೊಲೀಸರ ಮೇಲೆ ಹಲ್ಲೆ: ಮೂವರ ಬಂಧನ

ಐಎಎನ್ಎಸ್
Published 16 ಮೇ 2023, 8:23 IST
Last Updated 16 ಮೇ 2023, 8:23 IST
ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ    

ನವದೆಹಲಿ: ಕೊಳೆಗೇರಿ ನಿವಾಸಿಗಳ ಗುಂಪೊಂದು ಮೂವರು ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳನ್ನು ಥಳಿಸಿ, ಪೊಲೀಸ್‌ ವಾಹನವನ್ನು ಹಾನಿಗೊಳಿಸಿರುವ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಈ ಘಟನೆ ಸೋಮವಾರ ರಾತ್ರಿ ನಡೆದಿದೆ. ಪ್ರಕರಣ ಸಂಬಂಧ ಅಬ್ದುಲ್ ಖಾಲಿದ್ (74), ಎಂ.ಡಿ ಹಸೀನ್ (28) ಮತ್ತು ಫೂಲ್ ಬಾಬು (25) ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪೆಟ್ರೋಲ್ ಪಂಪ್ ಕಬ್ರಿಸ್ತಾನ್ ಎಂಬಲ್ಲಿ ಗಲಾಟೆ ನಡೆಯುತ್ತಿದ್ದ ಸಮಯದಲ್ಲಿ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಲಾಟೆಯಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿ ಪಿಸಿಆರ್ ವಾಹನದಲ್ಲಿ ಠಾಣೆಗೆ ತೆರಳುತ್ತಿದ್ದರು. ಈ ವೇಳೆ ಸ್ಥಳೀಯ ಕೊಳೆಗೇರಿ ನಿವಾಸಿಗಳು ವಾಹನವನ್ನು ಸುತ್ತುವರಿದು ಹಾನಿಗೊಳಿಸಿದ್ದಾರೆ. ಪಿಸಿಆರ್ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಶಾಸ್ತ್ರಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳಾದ ಪಪ್ಪು ಲಾಲ್ ಮೀನಾ, ರಾಜಕುಮಾರ್ ಮತ್ತು ರಾಬಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.