
ಪಿಟಿಐ
ಕಾನ್ಪುರ (ಉತ್ತರ ಪ್ರದೇಶ): ಅಕ್ರಮವಾಗಿ ಭಾರತ ಪ್ರವೇಶಿಸಿರುವ ಆರೋಪದಲ್ಲಿ ಮೂವರು ರೋಹಿಂಗ್ಯಾ ವಲಸಿಗರನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಕಾನ್ಪುರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಇಬ್ರಾಹಿಂ (26) ಮೊಹಮ್ಮದ್ ಹಶೀಂ (21) ಹಾಗೂ ಶೌಕ್ ತಾರಾ (17) ಎಂದು ಗುರುತಿಸಲಾಗಿದೆ. ಬಾಂಗ್ಲಾದೇಶದ ರೋಹಿಂಗ್ಯ ನಿರಾಶ್ರಿತ ಶಿಬಿರದಲ್ಲಿ ಆಶ್ರಯ ಪಡೆದಿದ್ದ ಇವರು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದಾರೆ ಎಂದು ಸರ್ಕಲ್ ಆಫೀಸರ್ ದುಷ್ಯಂತ್ ಕುಮಾರ್ ಸಿಂಗ್ ಗುರುವಾರ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.