ADVERTISEMENT

ಕದನ ವಿರಾಮ ಉಲ್ಲಂಘನೆ: ಪಾಕ್‌ ಸೇನೆಯಿಂದ ಅಪ್ರಚೋದಿತ ದಾಳಿ

ಪಿಟಿಐ
Published 10 ನವೆಂಬರ್ 2020, 11:00 IST
Last Updated 10 ನವೆಂಬರ್ 2020, 11:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಹಳ್ಳಿಗಳು ಮತ್ತು ಸೇನಾ ಠಾಣೆಗಳನ್ನು ಗುರಿಯಾಗಿಸಿಕೊಂಡುಮಂಗಳವಾರ ಶೆಲ್‌ ದಾಳಿ ಮತ್ತು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ಪೂಂಚ್‌ ಜಿಲ್ಲೆಯ ಶಹಪುರ್, ಕಿರಣಿ ಮತ್ತು ಕಾಸ್ಬಾ ವಲಯಗಳಲ್ಲಿ ಮಂಗಳವಾರ ಬೆಳಿಗ್ಗೆ 10.30 ಕ್ಕೆ ಪಾಕಿಸ್ತಾನ ಸೇನೆಯು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ’ ಎಂದು ರಕ್ಷಣಾ ಇಲಾಖೆ ವಕ್ತಾರ ಮಾಹಿತಿ ನೀಡಿದರು.

ಈ ವರ್ಷ ಅಕ್ಟೋಬರ್‌ ತಿಂಗಳಿನವರೆಗೆ ಪಾಕಿಸ್ತಾನಿ ಸೇನೆಯು ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿ ಬಳಿ ಒಟ್ಟು 3589 ಬಾರಿ ಕದನ ವಿರಾಮ ಉಲ್ಲಂಘಿಸಿದೆ. 2019ರಲ್ಲಿ 3168 ಬಾರಿ ಕದನ ವಿರಾಮ ಉಲ್ಲಂಘಿಸಿತ್ತು ಎಂದು ಅಧಿಕೃತ ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.