ADVERTISEMENT

ಛತ್ತೀಸಗಢ | ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ಪಿಟಿಐ
Published 4 ಫೆಬ್ರುವರಿ 2025, 11:27 IST
Last Updated 4 ಫೆಬ್ರುವರಿ 2025, 11:27 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಮಂಗಳವಾರ) ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕ ಸಾಧಕ (ಐಇಡಿ) ಸ್ಫೋಟಗೊಂಡು ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮತ್ತೊಬ್ಬ ಸಿಬ್ಬಂದಿ 'ಸ್ಪೈಕ್ ಟ್ರಾಪ್'ನಲ್ಲಿ (ಮೊನಚಾದ ಲೋಹದ ತುಂಡು) ಸಿಲುಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌)ಯ ಜಂಟಿ ತಂಡಗಳು ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿತ್ತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕ ಸಾಧಕ (ಐಇಡಿ) ಸ್ಫೋಟಗೊಂಡು ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮತ್ತೊಬ್ಬ ಸಿಬ್ಬಂದಿ ನಕ್ಸಲರು ಸೃಷ್ಟಿಸಿದ್ದ 'ಸ್ಪೈಕ್ ಟ್ರಾಪ್'ನಲ್ಲಿ ಸಿಲುಕಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡ ಸಿಬ್ಬಂದಿಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ವಿಮಾನದ ಮೂಲಕ ಕರೆದೊಯ್ಯಲಾಯಿತು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.