ADVERTISEMENT

ಮಹಾರಾಷ್ಟ್ರ: ಭಿವಾಂಡಿಯಲ್ಲಿ ಮೂರು ಮಹಡಿ ಕಟ್ಟಡ ಕುಸಿತ, 10 ಸಾವು

ಏಜೆನ್ಸೀಸ್
Published 21 ಸೆಪ್ಟೆಂಬರ್ 2020, 4:22 IST
Last Updated 21 ಸೆಪ್ಟೆಂಬರ್ 2020, 4:22 IST
ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವುದು – ಚಿತ್ರ ಕೃಪೆ – ಗ್ರೇಟರ್‌ ಮುಂಬೈ ಟ್ವಿಟರ್ ಖಾತೆ
ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವುದು – ಚಿತ್ರ ಕೃಪೆ – ಗ್ರೇಟರ್‌ ಮುಂಬೈ ಟ್ವಿಟರ್ ಖಾತೆ   

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಮೂರು ಮಹಡಿ ಕಟ್ಟದ ಕುಸಿದುಬಿದ್ದು 10 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 25ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಮುಂಜಾನೆ ಸುಮಾರು 3.40ರ ವೇಳೆಗೆ ಕಟ್ಟಡ ಕುಸಿದುಬಿದ್ದಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲಾಗುತ್ತಿದೆ. ಮಗುವೊಂದನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ಸುಮಾರು 20 ಜನರನ್ನು ಈಗಾಗಲೇ ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.