ADVERTISEMENT

ಬಿಹಾರ: ಮೂವರು ಶಂಕಿತ ಪಿಎಫ್‌ಐ ಕಾರ್ಯಕರ್ತರ ಬಂಧನ

ಪಿಟಿಐ
Published 4 ಫೆಬ್ರುವರಿ 2023, 9:58 IST
Last Updated 4 ಫೆಬ್ರುವರಿ 2023, 9:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಟ್ನಾ: ಬಿಹಾರದಲ್ಲಿ ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಮೂವರು ಶಂಕಿತ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಬಿಹಾರ ಪೊಲೀಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಕೇಂದ್ರ ಏಜೆನ್ಸಿ ಹಾಗೂ ರಾಜ್ಯ ಪೊಲೀಸರ ಜಂಟಿ ಕಾರ್ಯಾಚರಣೆ ಇದಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಬಂಧನ ಸಂಭವ ಇದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆ. ಎಸ್. ಗಂಗಾವರ್ ತಿಳಿಸಿದ್ದಾರೆ.

ಕಳೆದ ವರ್ಷ ದೇಶದ ವಿವಿಧೆಡೆಗಳಲ್ಲಿ ಎನ್‌ಎಐ ನಡೆಸಿದ್ದ ದಾಳಿಯಲ್ಲಿ ಪಿಎಫ್‌ಐಗೆ ಸೇರಿದ ಸುಮಾರು 350 ಜನರನ್ನು ಬಂಧಿಸಲಾಗಿತ್ತು.

ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು, ಕಾನೂನುಬಾಹಿರ, ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಕಳೆದ ವರ್ಷ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ಅವಧಿಗೆ ನಿಷೇಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.