ಜಮ್ಮು: ಕುಲ್ಗಾಮ್‌ನ ರೇವಂಡಿ ಪಯೀನ್ ಪ್ಯಾಂತ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ 'ಚಿನಾರ್ ಕೋರ್' ಹೇಳಿದೆ.
ಮೇ 6ರ ರಾತ್ರಿಯಿಂದ ಮೇ 7ರ ವರೆಗೆ ನಡೆದ ಸುಮಾರು 40 ಗಂಟೆಗಳ ಕಾರ್ಯಾಚರಣೆ ಅಂತ್ಯವಾಗಿದೆ. ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಭಾರಿ ಹೊಡೆತ ನೀಡಿದ್ದೇವೆ ಎಂದು ಟ್ವೀಟ್ ಮಾಡಿದೆ.
ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಚಿನಾರ್ ಕೋರ್ ಬದ್ಧವಾಗಿದೆ ಎಂದೂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.