ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ನ ಮೂವರು ಉಗ್ರರು ಹತ್ಯೆಯಾಗಿದ್ದಾರೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಕೇಂದ್ರೀಯ ಮೀಸಲು ಭದ್ರತಾಪಡೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ‘ಕಾರ್ಯಾಚರಣೆ ವೇಳೆ ನಡೆದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಟಿಆರ್‌ಎಫ್‌ನ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಉಗ್ರರ ವಿರುದ್ಧದ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.