ಶ್ರೀನಗರ: ‘ಜಮ್ಮು-ಕಾಶ್ಮೀರದ ಆವಂತಿಪುರ ಬಳಿಯ ನಾಗಬೀರನ್ ಟ್ರಾಲ್ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.
ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮೂವರು ಉಗ್ರರು ನಾಗಬೀರನ್ ಟ್ರಾಲ್ ಪ್ರದೇಶದಲ್ಲಿ ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಯು ಶೋಧ ನಡೆಸಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸದ್ಯ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.