ರಾಯಪುರ: ಛತ್ತೀಸಗಡದ ಧಮ್ತಾರಿ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ.
ವಿಶೇಷ ಭದ್ರತಾ ಪಡೆ ಶನಿವಾರ ಬೆಳಿಗ್ಗೆ ಖಲ್ಲಾರಿ ಮತ್ತು ಮೇಚ್‌ಕಾ ಗ್ರಾಮದ ನಡುವಿನ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಿದರು.
‘ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಏಳು ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ’ಎಂದು ನಕ್ಸಲ್ ವಿರೋಧಿ ಕಾರ್ಯಾಚರಣೆ ವಿಭಾಗದ ಡಿಐಜಿ ಸುಂದರ್‌ರಾಜ್ ಪಿ. ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.