ಭದ್ರತಾ ಪಡೆ
ಬಾಲಘಾಟ್: ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಹತಾರಾಗಿದ್ದಾರೆ ಎಂದು ಬುಧವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಬಾಲಘಾಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ದಾಬರ್ ತಿಳಿಸಿದ್ದಾರೆ.
ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ರೊಂಡಾ ಅರಣ್ಯ ಪ್ರದೇಶದ ಬಳಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಯು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರನ್ನು ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕಾರ್ಯಾಚರಣೆ ವೇಳೆ ಎಎನ್‌ಎಸ್‌ಎಎಸ್ ರೈಫಲ್, ಎಸ್‌ಎಲ್‌ಆರ್ ಮತ್ತು 303 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.