ADVERTISEMENT

ಥಾಣೆ: ಪವರ್‌ಲೂಮ್ ಕಾರ್ಖಾನೆಯ ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

ಪಿಟಿಐ
Published 17 ಏಪ್ರಿಲ್ 2021, 3:58 IST
Last Updated 17 ಏಪ್ರಿಲ್ 2021, 3:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್‌ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಟೈ ಪ್ರದೇಶದ ತುಕಾರಾಂ ಕಾಂಪೌಂಡ್‌ನಲ್ಲಿ ಶುಕ್ರವಾರ ಸಂಜೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

‘ದುರಸ್ತಿ ಕಾರ್ಯದಲ್ಲಿದ್ದ ಪವರ್‌ಲೂಮ್ ಕಾರ್ಖಾನೆಯ ಕಾಂಪೌಂಡ್ ಗೋಡೆ ಕುಸಿದಿದೆ. ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಜೀವಂತ ಸಮಾಧಿ ಆಗಿದ್ದಾರೆ. ಇತರ ನಾಲ್ವರು ಗಾಯಗೊಂಡಿದ್ದಾರೆ’ ಎಂದು ಥಾಣೆ ಮಹಾನಗರ ಪಾಲಿಕೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್‌ಡಿಎಂಸಿ)ದ ಮುಖ್ಯಸ್ಥ ಸಂತೋಷ್ ಕದಮ್ ಶುಕ್ರವಾರ ತಡರಾತ್ರಿ ಬಿಡುಗಡೆಯಾಗಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕಾರ್ಮಿಕರನ್ನು ಮನ್ಸುಖ್ ಭಾಯ್ (45), ರಾಂಚೋಡ್ ಪ್ರಜಾಪತಿ (50) ಮತ್ತು ಭಗವಾನ್ ಜಾಧವ್ (55) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.