ADVERTISEMENT

ಬಂಗಾಳದಲ್ಲಿ ಬಿಸಿಲಿನ ಶಾಖ; ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರ ಸಾವು

ಪಿಟಿಐ
Published 12 ಜೂನ್ 2022, 9:55 IST
Last Updated 12 ಜೂನ್ 2022, 9:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಭಕ್ತರು ಬಿಸಿಲಿನ ಶಾಖದಿಂದ ಮೃತಪಟ್ಟಿದ್ದಾರೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಪಾನೀಹಾಟಿಯ ಇಸ್ಕಾನ್‌ ದೇವಸ್ಥಾನದ ದಂಡ ಮಹೋತ್ಸವದಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ. ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಮೃತ ಭಕ್ತರ ಕುಟುಂಬಕ್ಕೆ ತೀವ್ರ ಸಂತಾಪಗಳು ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.

ವಿಪರೀತ ಬಿಸಿಲು ಮತ್ತು ಜನಸಂದಣಿಯಿಂದಾಗಿ ಗಂಭೀರವಾಗಿ ಅಸ್ವಸ್ಥಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಖಚಿತಪಡಿಸಲಾಯಿತು ಎಂದು ಪೊಲೀಸ್‌ ಅಧಿಕಾರಿ ಧ್ರುವಜ್ಯೋತಿ ದೇವ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.