ADVERTISEMENT

ಕೋವಿಡ್‌ ಆಘಾತದ ನಡುವೆಯೇ ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಜನವರಿ 2022, 5:06 IST
Last Updated 8 ಜನವರಿ 2022, 5:06 IST
ದೆಹಲಿಯಲ್ಲಿ ಮಳೆ ಸುರಿಯುತ್ತಿರುವ ದೃಶ್ಯ –ಪಿಟಿಐ ಚಿತ್ರ
ದೆಹಲಿಯಲ್ಲಿ ಮಳೆ ಸುರಿಯುತ್ತಿರುವ ದೃಶ್ಯ –ಪಿಟಿಐ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ತಡರಾತ್ರಿ ಸುರಿದ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಹಲವು ರಸ್ತೆಗಳು ಜಲಾವೃತಗೊಂಡಿವೆ.

ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿರುವ ದೃಶ್ಯಗಳು ಕಂಡುಬಂದವು.

‘ದೆಹಲಿ-ಎನ್‌ಸಿಆರ್‌ನಲ್ಲಿ (ಗುರುಗ್ರಾಮ, ಫರಿದಾಬಾದ್, ಮನೇಸರ್) ಕರ್ನಾಲ್, ಸೋನಿಪತ್‌, ಝಜ್ಜರ್‌, ಪಾಣಿಪತ್‌ ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ’ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ADVERTISEMENT

ದೆಹಲಿಯಲ್ಲಿ ಜ. 9ರವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೆಹಲಿಯ ಹಲವೆಡೆ ಮಳೆಯಾಗುತ್ತಿರುವುದರಿಂದ ಕಡಿಮೆ ತಾಪಮಾನ ದಾಖಲಾಗಿದೆ. ಜತೆಗೆ, ನಿರಾಶ್ರಿತರನ್ನು ತಾತ್ಕಾಲಿಕ ಶೆಡ್‌ಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ 17,335 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ ದೆಹಲಿಯಲ್ಲಿ 39,873 ಸಕ್ರಿಯ ಪ್ರಕರಣಗಳಿವೆ. ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ 17.73 ರಷ್ಟಿದ್ದು, ಮರಣ ಪ್ರಮಾಣ ಶೇ 1.67 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.