ಹುಲಿ
ಭೋಪಾಲ್: ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ಉಮರಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಮೃತ ಮಹಿಳೆಯನ್ನು 44 ವರ್ಷದ ಗುಲ್ಲಿ ಬಾಯಿ ಯಾದವ್ ಎಂದು ಗುರುತಿಸಲಾಗಿದೆ.
ಉಮರಿಯಾ ಜಿಲ್ಲೆಯ ಬಾಂಧವ್‌ಗರ್ ಹುಲಿ ಸಂರಕ್ಷಿತಾರಣ್ಯದ ಮಾನ್ಪುರ್ ಅರಣ್ಯ ವಲಯದ ಬಫರ್ ಜೋನ್ ಆದ ರಾಖಿ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಗುಲ್ಲಿ ಬಾಯಿ ಯಾದವ್ ಅವರು ಇಂದು ಬೆಳಿಗ್ಗೆ ಕೆಲಸ ಎಂದು ಅರಣ್ಯದ ಕಡೆಗೆ ಹೋಗುತ್ತಿದ್ದಾಗ ಹುಲಿ ದಾಳಿ ಮಾಡಿದೆ. ದಾಳಿಯ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮೃತದೇಹವನ್ನು ತಿನ್ನಲು ಹುಲಿ ಯತ್ನಿಸಿ ಜನರ ಕೂಗಾಟ ಕೇಳಿ ಕಾಲುವೆಗೆ ಎಳೆದು ಪರಾರಿಯಾಗಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಇಲಾಖೆ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರಿಗೆ ₹10,000 ನೀಡಲಾಗಿದೆ. ಪರಿಹಾರ ವಿತರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.