ADVERTISEMENT

‘ಟಿಕ್‌ ಟಾಕ್‌’ ನಿಷೇಧ ಅರ್ಜಿ ತುರ್ತು ವಿಚಾರಣೆಗೆ ನಕಾರ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 20:17 IST
Last Updated 8 ಏಪ್ರಿಲ್ 2019, 20:17 IST

ನವದೆಹಲಿ:ಟಿಕ್‌ ಟಾಕ್‌ ಆ್ಯಪ್‌ ನಿಷೇಧಿಸಿರುವ ಮದ್ರಾಸ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಭಾರತದ ಯುವ ಸಮೂಹವನ್ನು ಆಕರ್ಷಿಸುತ್ತಿರುವ ಚೀನಾ ಮೂಲದ ಟಿಕ್‌ ಟಾಕ್‌ಮೊಬೈಲ್ ಆ್ಯಪ್‌ ಡೌನ್‌ಲೋಡ್‌ ಮಾಡುವುದನ್ನು ನಿಷೇಧ ಮಾಡುವಂತೆ ಮದ್ರಾಸ್‌ ಹೈಕೋರ್ಟ್‌ ಏಪ್ರಿಲ್‌ 3ರಂದು ಕೇಂದ್ರ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು.

‘ಅಶ್ಲೀಲ ಮತ್ತು ಅಸಭ್ಯ ವಿಡಿಯೊಗಳು ಈ ಆ್ಯಪ್‌ನಲ್ಲಿವೆ. ಈ ಆ್ಯಪ್‌ನಿಂದ ತಯಾರಾಗುತ್ತಿರುವ ವಿಡಿಯೊಗಳು ವ್ಯಕ್ತಿಯ ಖಾಸಗಿತನವನ್ನು ಹರಣ ಮಾಡುತ್ತಿವೆ’ ಎಂದು ಅಭಿಪ್ರಾಯಪಟ್ಟಿದ್ದ ಮದ್ರಾಸ್‌ ಹೈಕೋರ್ಟ್‌, ಟಿಕ್‌ ಟಾಕ್‌ನಿಂದ ಮಾಡಲಾದ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೂ ಸೂಚನೆ ನೀಡಿತ್ತು.

ADVERTISEMENT

ಇದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ನಿಗದಿತ ಸಮಯ ಬಂದಾಗಲೇ ಅರ್ಜಿಯ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.