ADVERTISEMENT

ತಿರುಪತಿ ದುರಂತ: ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ

ಪಿಟಿಐ
Published 9 ಜನವರಿ 2025, 7:43 IST
Last Updated 9 ಜನವರಿ 2025, 7:43 IST
<div class="paragraphs"><p>ತಿರುಪತಿಯಲ್ಲಿ ನಡೆದ ಕಾಲ್ತುಳಿತ ದುರಂತ</p></div>

ತಿರುಪತಿಯಲ್ಲಿ ನಡೆದ ಕಾಲ್ತುಳಿತ ದುರಂತ

   

ಪಿಟಿಐ ಚಿತ್ರ

ತಿರುಪತಿ: ತಿರುಪತಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಮಂದಿ ಭಕ್ತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಧನ ನೀಡುವುದಾಗಿ ಆಂಧ್ರಪ್ರದೇಶ ಮುಜರಾಯಿ ಇಲಾಖೆ ಸಚಿವ ಅಂಗನಿ ಸತ್ಯ ಪ್ರಸಾದ್‌ ಹೇಳಿದ್ದಾರೆ.

ADVERTISEMENT

‘ಘಟನೆ ನಿಜಕ್ಕೂ ದುಃಖ ತಂದಿದೆ. ಹೋದ ಜೀವವನ್ನು ಮರಳಿತರಲಾಗದು. ಆದರೆ ಕುಟುಂಬಕ್ಕೆ ನೆರವಾಗಬಹುದು’ ಎಂದು ಅವರು ತಿಳಿಸಿದ್ದಾರೆ.

‌‌ಬುಧವಾರ ರಾತ್ರಿ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.

40 ಮಂದಿ ಗಾಯಾಳುಗಳಲ್ಲಿ 32 ಗಾಯಾಳುಗಳು ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ. 

ದುರಂತಕ್ಕೆ ಸಿಎಂ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಸಚಿವರು ಸೇರಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋದ ‍ಪಕ್ಷದ ನಾಯಕ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.