ADVERTISEMENT

ನ್ಯಾ. ವರ್ಮಾ ಪದಚ್ಯುತಿ; ಲೋಕಸಭೆಯಲ್ಲಿ ನಿರ್ಣಯ ಮಂಡನೆ: ರಿಜಿಜು

ಪಿಟಿಐ
Published 25 ಜುಲೈ 2025, 15:35 IST
Last Updated 25 ಜುಲೈ 2025, 15:35 IST
ಕಿರಣ್‌ ರಿಜಿಜು
ಕಿರಣ್‌ ರಿಜಿಜು   

ನವದೆಹಲಿ: ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಶುಕ್ರವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲೂ ಇದೇ ರೀತಿಯ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ನೋಟಿಸ್‌ ಸಲ್ಲಿಸಿದ್ದವು. ಆದರೆ ಆ ನೋಟಿಸ್‌ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಆರೋಪದ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವುದು ಎಲ್ಲಾ ರಾಜಕೀಯ ಪಕ್ಷಗಳ ಸರ್ವಾನುಮತದ ನಿರ್ಧಾರ ಎಂದು ರಿಜಿಜು ಶುಕ್ರವಾರ ಹೇಳಿದ್ದಾರೆ. ಆಡಳಿತ ಮೈತ್ರಿಕೂಟ ಮತ್ತು ವಿರೋಧ ಪಕ್ಷಗಳ 152 ಸಂಸದರು ಸಹಿ ಮಾಡಿದ ಈ ನೋಟಿಸ್‌ಗೆ ಲೋಕಸಭೆಯಲ್ಲಿ ಒಪ್ಪಿಗೆ ದೊರೆಯಲಿದೆ ಎಂದು ಅವರು ಪ್ರತಿಪಾದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.