ತಿರುಪತಿ ಕಾಲ್ತುಳಿತ ದುರಂತ:ನೆರವು ನೀಡುವಂತೆ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಮನವಿ
ನವದೆಹಲಿ: ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ತೀವ್ರ ದುಃಖ ತಂದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ತಿರುಪತಿಯಲ್ಲಿ ಸಂಭವಿಸಿದ ದುರಂತ ತೀವ್ರ ದುಃಖವನ್ನುಂಟುಮಾಡಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡ ಎಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಾಧ್ಯವಿರುವ ಎಲ್ಲ ನೆರವು ನೀಡಿ’ ಎಂದು ಬರೆದುಕೊಂಡಿದ್ದಾರೆ.
ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಬುಧವಾರ ರಾತ್ರಿ ‘ವೈಕುಂಠ ದ್ವಾರ ದರ್ಶನ’ದ ಟೋಕನ್ ಪಡೆದುಕೊಳ್ಳುವಾಗ ನೂರಾರು ಜನರು ಒಟ್ಟಿಗೆ ಮುಗಿಬಿದ್ದ ಕಾರಣ ಉಂಟಾದ ಕಾಲ್ತುಳಿತದಲ್ಲಿ ಆರು ಮಂದಿ ಭಕ್ತರು ಮೃತಪಟ್ಟಿದ್ದಾರೆ. ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.